೨೦೦೪ರಿಂದಲೇ ಪ್ರಶಸ್ತಿ ಮೊತ್ತವನ್ನು ಪ್ರಾಯೋಜಿಸುವ ಮೂಲಕ ಪ.ಗೋ ಟ್ರಸ್ಟ್‌ಗೆ ನೆರವಾಗುತ್ತಿದ್ದವರು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು.
ಈ ಬಾರಿ ಪ್ರಶಸ್ತಿ ಮೊತ್ತವನ್ನು ಹೆಚ್ಚಿಸುವಂತೆ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಇತ್ತೀಚೆಗೆ ಶ್ರೀ ಹೆಗ್ಗಡೆಯವರ ಕಚೇರಿಗೆ ತೆರಳಿ ಮನವಿ ಮಾಡಿಕೊಂಡರು. ಪ್ರಶಸ್ತಿ ಮೊತ್ತ ಕಡಮೆಯಾಗಿದ್ದು, ಅದನ್ನು ಏರಿಸುವುದೇ ಸೂಕ್ತ ಎಂದು ಅಭಿಪ್ರಾಯಪಟ್ಟ ಹೆಗ್ಗಡೆಯವರು ಪ್ರಶಸ್ತಿ ಮೊತ್ತವನ್ನು ೫೦೦೧ ರು.ಗೆ ಏರಿಸಲು ಒಪ್ಪಿಕೊಂಡರು. ಅವರ ಮಾರ್ಗದರ್ಶನಕ್ಕೆ ಪತ್ರಕರ್ತರ ಸಂಘ ಆಭಾರಿ. ಸಂಘದ ಅಧ್ಯಕ್ಷ ಹರ್ಷ, ಪ್ರಧಾನ ಕಾರ್ಯದರ್ಶಿ ಗುರುವಪ್ಪ ಬಾಳೆಪುಣಿ, ಖಜಾಂಚಿ ಯೋಗೀಶ್ ಹೊಳ್ಳ, ಮಂಗಳೂರು ಪ್ರೆಸ್ ಕ್ಲಬ್ ಜತೆ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ಇಂದಾಜೆ ನಿಯೋಗದಲ್ಲಿದ್ದರು.
No comments:
Post a Comment